ಚಿಕ್ಕಮಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಅವರು ಹೆಲಿಕ್ಯಾಪ್ಟರ್ ಮೂಲಕ ಶೃಂಗೇರಿಗೆ ಆಗಮಿಸಿದ್ದು, ಶಾರದಾಂಬೆಗೆ ಪೂಜೆ ಸಲ್ಲಿಸಿ, ಬಳಿಕ ಜಗದ್ಗುರುಗಳ ಭೇಟಿ ಮಾಡಲಿದ್ದು, ರಾಮನಗರ ಜೆಡಿಎಸ್ ಅಭ್ಯರ್ಥಿಯಾಗಿರೋ ಅನಿತಾ ಕುಮಾರಸ್ವಾಮಿ ಅವರು ಕಳೆದ ಬಾರಿಯು ಜೆಡಿಎಸ್ ನಿಂದ ಅಭ್ಯರ್ಥಿಗಳು ಕಣಕ್ಕಿಳಿಯುವ ಮುನ್ನ ಶಾರದಾಂಬೆಗೆ ಪೂಜೆ ಸಲ್ಲಿಸಿದ್ದರು.










