ಮುಂಬೈ : ಖ್ಯಾತ ಹಿಂದೂಸ್ಥಾನಿ ಸಂಗೀತಗಾರ್ತಿ ಅನ್ನಪೂರ್ಣ ದೇವಿ (91) ಅನಾರೋಗ್ಯದಿಂದ ಇಂದು ಮುಂಬೈನಲ್ಲಿ ವಿಧಿವಶರಾಗಿದ್ದಾರೆ. ಪದ್ಮಭೂಷಣ ಪ್ರಶಸ್ತಿ ವಿಜೇತರಾಗಿದ್ದ ಅನ್ನಪೂರ್ಣ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು ಇಂದು ಮುಂಜಾನೆ 3.51ರ ಸುಮಾರಿಗೆ ಆಸ್ಪತ್ರೆಯಲ್ಲಿಯೇ ನಿಧನ ಹೊಂದಿದ್ದಾರೆಂದು ತಿಳಿದುಬಂದಿದೆ.










