ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ…

380
firstsuddi

ಬೆಂಗಳೂರು:ಎಚ್ಎಎಲ್ ಸಿಬ್ಬಂದಿ ಮತ್ತು ನಿವೃತ್ತ ನೌಕರರೊಂದಿಗೆ ರಫೇಲ್ ಹಗರಣದ ವಿಷಯದ ಬಗ್ಗೆ ಸಂವಾದ ನಡೆಸಲು ಇಂದು ಬೆಂಗಳೂರಿಗೆ ಆಗಮಿಸಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಕುಮಾರಕೃಪ ಅತಿಥಿ ಗೃಹದಲ್ಲಿ ಭೇಟಿಯಾಗಿ ಸುಮಾರು 15 ನಿಮಿಷಗಳ ಕಾಲ ಪ್ರಸಕ್ತ ರಾಜಕೀಯ ವಿದ್ಯಾಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.