ಚಿಕ್ಕಮಗಳೂರು : ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಹಾಂದಿ ಸಮೀಪದ ಬಾರ್ಗಲ್ ಗ್ರಾಮದ ಬಳಿ ನಡೆದಿದ್ದು, ದಾವಣಗೆರೆಯಿಂದ ಚಿಕ್ಕಮಗಳೂರು ಮಾರ್ಗವಾಗಿ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಗೆ ಲಾರಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಗೆ ಡಿಕ್ಕಿಯಾಗಿದ್ದು, ಲಾರಿ ಚಾಲಕ ಸೇರಿದಂತೆ ಬಸ್ಸಿನಲ್ಲಿದ್ದ 30 ಪ್ರಯಾಣಿಕರಿಗೆ ಗಾಯಗಳಾಗಿದ್ದು, ಗಾಯಗೊಂಡ ಪ್ರಯಾಣಿಕರನ್ನು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ಹಾಗೂ ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ರವಾನೆ ಮಾಡಲಾಗಿದ್ದು, ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.










