ಕೇರಳ: ಶಬರಿಮಲೆಯ ಅಯ್ಯಪ್ಪ ದೇವಾಲಯವು ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಇಂದು ಮೊದಲ ಬಾರಿಗೆ ಅಯ್ಯಪ್ಪಸ್ವಾಮಿ ದರ್ಶನಕ್ಕೆ ಬಾಗಿಲು ತೆರೆದಿದ್ದು, ಅಯ್ಯಪ್ಪಸ್ವಾಮಿ ದೇವಾಲಯಕ್ಕೆ ತೆರಳುತ್ತಿದ್ದ ಪತ್ರಕರ್ತೆಯ ಮೇಲೆ ಪ್ರತಿಭಟನಕಾರರು ಹಲ್ಲೆಗೆ ಯತ್ನಿಸಿರುವ ಘಟನೆ ಪಟ್ಟಣಂತಿಟ್ಟ ಹೊಸ ಬಸ್ ನಿಲ್ದಾಣದ ಬಳಿ ನಡೆದಿದ್ದು, ನ್ಯೂಸ್ ವೆಬ್ ಸೈಟ್ ನ ಸಂಪಾದಕಿ ಲಿಬಿ ಸಿ.ಎಸ್ ಅವರು ಕಪ್ಪು ವಸ್ತ್ರ ಧರಿಸಿ ಇರಿಮುಡಿ ಕಟ್ಟಿಕೊಂಡು ಶಬರಿಮಲೆಗೆ ಆಗಮಿಸುತ್ತಿದ್ದಾಗ ಪ್ರತಿಭಟನಕಾರರು ಅವರನ್ನು ತಡೆದು ಹಲ್ಲೆಗೆ ಮುಂದಾಗಿದ್ದಾರೆ ಎಂದು ತಿಳಿದು ಬಂದಿದ್ದು, ಈ ವೇಳೆ ಸ್ಥಳಕ್ಕಾಗಮಿಸಿದ ಪೊಲೀಸರು ಪತ್ರಕರ್ತೆಗೆ ರಕ್ಷಣೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.










