ಕೃಷಿ ಉತ್ಪನ್ನ ಮಾರುಕಟ್ಟೆಯನ್ನು ರೈತ ಮತ್ತು ಗ್ರಾಹಕ ಸ್ನೇಹಿಯಾಗಿ ರೂಪಿಸಲಾಗುವುದು- ಅರೇನಳ್ಳಿ ಪ್ರಕಾಶ್…

800
firstsuddi

ಚಿಕ್ಕಮಗಳೂರು: ನಗರದ ಕೃಷಿ ಉತ್ಪನ್ನ ಮಾರುಕಟ್ಟೆಯನ್ನು ರೈತ ಮತ್ತು ಗ್ರಾಹಕ ಸ್ನೇಹಿಯಾಗಿ ರೂಪಿಸಲಾಗುವುದು ಎಂದು ಎಪಿಎಂಸಿ ನೂತನ ಅಧ್ಯಕ್ಷ ಅರೇನಳ್ಳಿ ಪ್ರಕಾಶ್ ಹೇಳಿದರು.ಎಪಿಎಂಸಿ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಬುಧವಾರ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು ್ಲ ರೈತರು ಮತ್ತು ಗ್ರಾಹಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆಗೆ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದರು.ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಇರುವ ಸಮಸ್ಯೆಗಳು ಗ್ರಾಹಕರು ಮತ್ತು ರೈತರು ಎದುರಿಸುತ್ತಿರುವ ತೊಂದರೆಗಳ ಕುರಿತು ಮಾರುಕಟ್ಟೆಯ ವರ್ತಕರು ಗ್ರಾಹಕರು ಮತ್ತು ರೈತರೊಂದಿಗೆ ಸಭೆ ನಡೆಸಿ, ಚರ್ಚಿಸಿ ಪರಿಹಾರೋಪಾಯ ಕಂಡುಕೊಳ್ಳಲಾಗುದು ಎಂದು ತಿಳಿಸಿದರು.
ನೂತನ ಅಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ ರೈತರು ಮತ್ತು ಗ್ರಾಹಕರ ಹಿತಕಾಪಾಡುವುದರ ಜೊತೆಗೆ ಮಾರುಕಟ್ಟೆಯನ್ನು ರಾಜ್ಯದಲ್ಲೇ ಮಾದರಿ ಮಾರುಕಟ್ಟೆಯಾಗಿ ಮಾಡಬೇಕು ಎಂದು ಕಿವಿಮಾತು ಹೇಳಿದರು.
ಇದೇ ವೇಳೆ ಕಾಂಗ್ರೇಸ್ ಮುಖಂಡರು ಮತ್ತು ಅಭಿಮಾನಿಗಳು ಪ್ರಕಾಶ್ ಅವರನ್ನು ಅಭಿನಂದಿಸಿದರು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎ.ಎನ್.ಮಹೇಶ್, ಜಿಲ್ಲಾ ಕಾಂಗ್ರೇಸ್ ಉಪಾಧ್ಯಕ್ಷ ಕೆ.ಎಸ್.ಶಾಂತೇಗೌಡ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಹಂಪಾಪುರ ಮಂಜೇಗೌಡ, ಎಪಿಎಂಸಿ ಮಾಜಿ ಅಧ್ಯಕ್ಷ ಹೆಚ್.ಪಿ.ರಾಜೀವ್, ಮಾಜಿ ಉಪಾಧ್ಯಕ್ಷ ಎಂ.ಎಸ್.ವಿಕ್ರಾಂತ್, ನಗರಸಭೆ ಸದಸ್ಯ ಹಿರೇಮಗಳೂರು ಪುಟ್ಟಸ್ವಾಮಿ, ನೇತ್ರಾವತಿ ತಿಮ್ಮೇಗೌಡ, ಜೆ.ವಿನಾಯಕ ಹಾಜರಿದ್ದರು.