ಮೈಸೂರು: ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಅವರ ತಾಯಿ ಪುಟ್ಟಚಿನ್ನಮ್ಮಣ್ಣಿ ಅವರ ನಿಧನದ ಸುದ್ದಿ ಕೇಳಿ ದುಃಖ ಉಂಟಾಗಿದೆ. ಅವರ ನಿಧನಕ್ಕೆ ಸಂತಾಪ ಸೂಚಿಸುತ್ತೇನೆ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ತಾಯಿ ಚಾಮುಂಡೇಶ್ವರಿ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಅವರು ಸಂತಾಪ ಸೂಚಿಸಿದ್ದಾರೆ.











