ಚಿಕ್ಕಮಗಳೂರು : ನಗರದ ಗೃಹ ಮಂಡಳಿ ಬಡಾವಣೆಯ ಶ್ರೀ ಶಿರಡಿ ಸಾಯಿ ಬಾಬಾ ಮಂದಿರದಲ್ಲಿ ಬಾಬಾ ಅವರ 100ನೇ ವರ್ಷದ ಆರಾಧನಾ ಮಹೋತ್ಸವ ಗುರುವಾರ ಸಹಸ್ರಾರು ಭಕ್ತರ ನಡುವೆ ಶ್ರದ್ದಾ ಭಕ್ತಿಯಿಂದ ನಡೆಯಿತು.ಆರಾಧನೆ ಪ್ರಯುಕ್ತ ಬೆಳಿಗ್ಗೆ ಕಾಕಡಾರತಿ, ಬಾಬಾ ಅವರ ವಿಗ್ರಹಕ್ಕೆ ಅಭಿಷೇಕ, ವಿಶೇಷ ಪೂಜೆ, ಹೂವಿನ ಅಲಂಕಾರ ಜರುಗಿತು, ಇದೇ ವೇಳೆ ಭಕ್ತರು ಸಾಮೂಹಿಕ ಭಜನೆ, ಸ್ತ್ರೋತ್ರ ಪಠಣ ಮಾಡಿದರು.
ಮಧ್ಯಾಹ್ನ ಮಹಾಮಂಗಳಾರತಿ ನಂತರ ಸಾರ್ವಜನಿಕ ಅನ್ನ ಸಂತರ್ಪಣೆ ಜರುಗಿತು, ರಾತ್ರಿ ನಡೆದ ದೀಪೋತ್ಸವದಲ್ಲಿ ಪಾಲ್ಗೊಂಡ ನೂರಾರು ಭಕ್ತರು ಮಂದಿರದಲ್ಲಿ ಸಾಮೂಹಿಕವಾಗಿ ದೀಪದ ಹಣತೆಗಳನ್ನು ಬೆಳಗಿದರು.ಗಾಯಕ ಸಾಯಿ ಸತೀಶ್ ಅವರಿಂದ ಭಕ್ತಿ ಗೀತೆಗಳ ಗಾಯನ ನಡೆಯಿತು, ಆರಾಧನೆ ಪ್ರಯುಕ್ತ ಬಾಬಾ ಅವರ ಮೂಲ ವಿಗ್ರಹದ ಪಾದ ಸ್ಪರ್ಶಕ್ಕೆ ಅವಕಾಶವಿದ್ದ ಹಿನ್ನೆಲೆಯಲ್ಲಿ ಬೆಳಗಿನಿಂದ ರಾತ್ರಿಯವರೆಗೆ ನಗರ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಸಹಸ್ರಾರು ಭಕ್ತರು ಸರತಿ ಸಾಲಿನಲ್ಲಿ ಸಾಗಿ ಪಾದಗಳನ್ನು ಮುಟ್ಟಿ ನಮಸ್ಕರಿಸಿ ಪೂಜೆ, ಪ್ರಾರ್ಥನೆ ಸಲ್ಲಿಸಿದರು.










