ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಸುವುದು ನಮ್ಮ ಗುರಿ: ಸಿದ್ದರಾಮಯ್ಯ…

280
firstsuddi

ಬೆಂಗಳೂರು: ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂಬರುವ ಲೋಕಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಕೋಮುವಾದಿ ಬಿಜೆಪಿಯನ್ನು ಸೋಲಿಸಲು ಜಾತ್ಯಾತೀತ ಪಕ್ಷಗಳು ಒಂದುಗೂಡಿದ್ದೇವೆ.2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದು ನಮ್ಮ ಗುರಿ. ಬಿಜೆಪಿ ಅಧಿಕಾರಕ್ಕೆ ಬಂದರೆ ಜನ ನೆಮ್ಮದಿಯಿಂದ ಇರಲು ಸಾಧ್ಯವಿಲ್ಲ.ನಾಲ್ಕು ಕ್ಷೇತ್ರಗಳಲ್ಲಿ ನಾನು ಪ್ರಚಾರ ಮಾಡುತ್ತೇನೆ.ಅಗತ್ಯವಿದ್ದರೆ ರಾಮನಗರದಲ್ಲೂ ಪ್ರಚಾರ ಮಾಡುತ್ತೇನೆ ಎಂದಿದ್ದಾರೆ.  ಮಾಜಿ ಪ್ರಧಾನಿ‌ ಹೆಚ್.ಡಿ. ದೇವೇಗೌಡ, ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಡಿ.ಕೆ.ಶಿವಕುಮಾರ್ ಜಂಟಿ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು