ಇಂದು ಬಂದ್ ಆಗಲಿದೆ ಶಬರಿಮಲೆ ಅಯ್ಯಪ್ಪ ದೇಗುಲ…

475
firstsuddi

ತಿರುವನಂತಪುರಂ :ಶಬರಿಮಲೆ ದೇವಸ್ಥಾನಕ್ಕೆ ಎಲ್ಲಾ ವಯೋಮಾನದ ಮಹಿಳೆಯರೂ ಪ್ರವೇಶಿಸಬಹುದು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದ ನಂತರ ಮೊದಲ ಬಾರಿ ದೇವಸ್ಥಾನದ ಬಾಗಿಲು ತೆರೆದಿದ್ದು, ಐದು ದಿನಗಳ ಪೂಜೆ ಬಳಿಕ ಇಂದು ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ ಬಾಗಿಲನ್ನು ಮುಚ್ಚಲಾಗುತ್ತದೆ. ಮುಂದಿನ ತಿಂಗಳು ಚಿತ್ರ ಆಟ್ಟ ತಿರುನಾಳ ಪೂಜೆಗಾಗಿ ಅಯ್ಯಪ್ಪ ದೇವಸ್ಥಾನದ ಬಾಗಿಲು ತೆರೆಯಲಿದೆ ಎಂದು ಮೂಲಗಳು ತಿಳಿಸಿವೆ.