ಮೂಡಿಗೆರೆ: ಕಾಡಾನೆಗಳ ಹಾವಳಿಯಿಂದ ಲಕ್ಷಾಂತರ ಮೌಲ್ಯದ ಬೆಳೆ ನಾಶ, ಅರಣ್ಯ ಇಲಾಖೆಯ ವಿರುದ್ಧ ಗ್ರಾಮಸ್ಥರ ಆಕ್ರೋಶ…

1070

ಮೂಡಿಗೆರೆ: ಕಾಡಂಚಿನ ಗ್ರಾಮಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಮೂರು ಕಾಡಾನೆಗಳನ್ನು ಓಡಿಸಲು ಗ್ರಾಮಸ್ಥರು ಹರಸಾಹಸ ಪಡುತ್ತಿರುವ ಘಟನೆ ತಾಲೂಕಿನ ಗುತ್ತಿಹಳ್ಳಿಯಲ್ಲಿ ನಡೆದಿದ್ದು, ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಕಾಡಾನೆಗಳ ಹಾವಳಿಯಿಂದ ಲಕ್ಷಾಂತರ ಮೌಲ್ಯದ ಬೆಳೆ ನಾಶವಾಗುತ್ತಿದ್ದು, ಅಲ್ಲದೇ ಕಳೆದ ರಾತ್ರಿ ಕಾಡಾನೆ ದಾಳಿಯಿಂದ ರೈತ ಸುನೀಲ್ ಎಂಬುವರು ಮೃತಪಟ್ಟಿದ್ದು,  ಕಾಡಾನೆಯನ್ನು ಸ್ಥಳಾಂತರ ಮಾಡುವಂತೆ ಅರಣ್ಯ ಇಲಾಖೆಯ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.