ಮೂಡಿಗೆರೆ: ಚಲಿಸುತ್ತಿದ್ದ ಬಸ್ಸಿನಿಂದ ಟೈರ್ ಕಳಚಿ ಬಿದ್ದ ಘಟನೆ ಮೂಡಿಗೆರೆ ಸಮೀಪದ ಭೂತನಕಾಡು ಬಳಿ ನಡೆದಿದ್ದು, ಚಿಕ್ಕಮಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಸರ್ಕಾರಿ ಬಸ್ ನ ಟೈರ್ ಮಾರ್ಗ ಮಧ್ಯೆಯೇ ಕಳಚಿ ಬಿದ್ದಿದ್ದು, ಟೈರ್ ಕಳಚಿದ್ದರಿಂದ ಚಾಲಕ ನಿಯಂತ್ರಣವನ್ನು ಕಳೆದುಕೊಂಡಿದ್ದು, ಸ್ವಲ್ಪದರಲ್ಲೇ ಭಾರೀ ಅನಾಹುತ ತಪ್ಪಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.










