ಜೈಲಿನಲ್ಲೇ ಕನ್ನಡ ವ್ಯಾಸಂಗಕ್ಕೆ ಮುಂದಾದ ಶಶಿಕಲಾ…

313
firstsuddi

ಬೆಂಗಳೂರು:ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ತಮಿಳುನಾಡಿನ ಶಶಿಕಲಾ ಅವರಿಗೆ ಕನ್ನಡ ಕಲಿಯುವ ಬಯಕೆ ಉಂಟಾಗಿದ್ದು, ಜೈಲಿನಲ್ಲಿದ್ದುಕೊಂಡೇ ಶಶಿಕಲಾ ಅವರು ಕನ್ನಡ ಸ್ನಾತಕೋತ್ತರ ಪದವಿ ಪಡೆಯುವ ಬಯಕೆಯನ್ನು ಜೈಲು ಸಿಬ್ಬಂದಿ ಬಳಿ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದ್ದು, ಈ ಬಗ್ಗೆ ವಿವಿ ದೂರ ಶಿಕ್ಷಣ ಅಧಿಕಾರಿಗಳೊಂದಿಗೆ ಜೈಲಿನ ಅಧಿಕಾರಿಗಳು ಮಾತುಕತೆ ನಡೆಸಲಿದ್ದು, ನಂತರ ಸ್ನಾತಕೋತ್ತರ ಪದವಿಗೆ ಪ್ರವೇಶಕ್ಕೆ ಬೇಕಾದ ವ್ಯವಸ್ಥೆಯನ್ನು ಕಲ್ಪಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.