ಬೆಂಗಳೂರು: ನಟ ಅರ್ಜುನ್ ಸರ್ಜಾ ವಿರುದ್ಧ ಮೀ ಟೂ ಆರೋಪ ಮಾಡಿದ್ದ ನಟಿ ಶ್ರುತಿ ಹರಿಹರನ್ ಇದೀಗ ಅರ್ಜುನ್ ಸರ್ಜಾ ಆಪ್ತ ಪ್ರಶಾಂತ್ ಸಂಬರಗಿ ವಿರುದ್ಧ ತಡರಾತ್ರಿ ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಶಾಂತ್ ಸಂಬರಗಿ ವಿರುದ್ಧ ಶ್ರುತಿ ಹರಿಹರನ್ ಜೀವ ಬೆದರಿಕೆ ಹಾಗೂ ಖಾಸಗಿತನಕ್ಕೆ ಧಕ್ಕೆ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ.










