ದತ್ತಪೀಠದಲ್ಲಿ ಪಾದುಕೆ ದರ್ಶನ ಹಿನ್ನೆಲೆ ಪ್ರವಾಸಿಗರಿಗೆ ನಿರ್ಬಂಧ…

378
firstsuddi

ಚಿಕ್ಕಮಗಳೂರು : ನಾಳೆ ಮಾಲಾಧಾರಿಗಳಿಂದ ದತ್ತಪೀಠದಲ್ಲಿ ಪಾದುಕೆ ದರ್ಶನ ಹಿನ್ನೆಲೆ ಮುಳ್ಳಯ್ಯನಗಿರಿ, ಮಾಣಿಕ್ಯಧಾರ, ದತ್ತಪೀಠ ಗಿರಿಶ್ರೇಣಿ ಪ್ರವಾಸಿಗರಿಗೆ ನಾಳೆ ಬೆಳಗ್ಗೆಯಿಂದ ಸಂಜೆಯವರೆಗೂ ನಿರ್ಬಂಧ ಘೋಷಿಸಿದ್ದು,  ನಾಳೆ ದತ್ತಪೀಠದಲ್ಲಿ ದತ್ತ ಪಾದುಕೆ ದರ್ಶನ, ಪೂಜೆಗೆ ಜಿಲ್ಲಾಡಳಿತ ಅವಕಾಶ ನೀಡಿದ್ದು, ಬೃಹತ್ ಶೋಭಾ ಯಾತ್ರೆಯೊಂದಿಗೆ  ದತ್ತಪೀಠಕ್ಕೆ ನಾಗಸಾಧುಗಳು ಸೇರಿದಂತೆ 5 ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಶ್ರೀರಾಮಸೇನೆ ಕಾರ್ಯಕರ್ತರು ತೆರಳಲಿದ್ದು, ಇನಾಂ ದತ್ತಾತ್ರೇಯ ಪೀಠ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ನಗರದಾದ್ಯಂತ ಸಿ.ಸಿ.ಟಿವಿ ಅಳವಡಿಸಲಾಗಿದೆ.ಜಿಲ್ಲೆಯ ಗಡಿ ಭಾಗ ಸೇರಿದಂತೆ ಚಿಕ್ಕಮಗಳೂರಿನಲ್ಲಿ ‌31 ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದೆ.  ಅಹಿತಕರ ಘಟನೆ ನಡೆಯದಿರಲು ಮುನ್ನೆಚ್ಚರಿಕೆಯಾಗಿ, 15 ಕೆ.ಎಸ್.ಆರ್.ಪಿ, 20 ಡಿಎಆರ್ ತುಕಡಿಗಳು ಸೇರಿದಂತೆ 2500 ಪೊಲೀಸರನ್ನು ನಿಯೋಜನೆ ಮಾಡಲಾಗಿದೆ ಎಂದು ಎಸ್ಪಿ ಹರೀಶ್ ಪಾಂಡೆ ತಿಳಿಸಿದ್ದಾರೆ.