ಗಂಡು ಮಗುವಿಗೆ ಜನ್ಮ ನೀಡಿದ ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ…

257
firstsuddi

ನವದೆಹಲಿ: ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಅವರು  ಇಂದು ಬೆಳಗ್ಗೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಬಗ್ಗೆ ಪತಿ ಕ್ರಿಕೆಟಿಗ ಶೋಯೆಬ್ ಮಲ್ಲಿಕ್ ಅವರು ತಾಯಿ ಹಾಗೂ ಮಗು ಇಬ್ಬರು ಆರೋಗ್ಯವಾಗಿದ್ದಾರೆಂದು ಟ್ವಿಟ್ ಮೂಲಕ ತಿಳಿಸಿದ್ದು, ಶೋಯೆಬ್ ಮಲ್ಲಿಕ್ ತಮ್ಮ ಟ್ವಿಟ್ಟರಿನಲ್ಲಿ ನಮಗೆ ಗಂಡು ಮಗು ಜನ್ಮವಾಗಿದೆ. ಸಾನಿಯಾ ಕೂಡ ಕ್ಷೇಮವಾಗಿದ್ದಾಳೆ. ನಿಮ್ಮ ಶುಭಾಶಯಕ್ಕೆ ಹಾಗೂ ಆಶೀರ್ವಾದಕ್ಕೆ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ.