ಶಿವಮೊಗ್ಗ :ಸುದ್ದಿಗೋಷ್ಠಿಯಲ್ಲಿ ಶಾಸಕ ಕುಮಾರ್ ಬಂಗಾರಪ್ಪ ಅವರು ಮಾತನಾಡಿ ಕುಮಾರಸ್ವಾಮಿಯವರೇ ವೈಯಕ್ತಿಕ ಟೀಕೆ ಮಾಡಬೇಡಿ. ನಿಮ್ಮ ವೈಯಕ್ತಿಕ ವಿಷಯವೂ ಚರ್ಚೆ ಮಾಡಬೇಕಾಗುತ್ತದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸುಳ್ಳಿನ ಕಂತೆ ಹೇಳುತ್ತಿದ್ದಾರೆ. ಅವರು ಭಾವನಾತ್ಮಕವಾಗಿ ಶಾಸಕರು ಹಾಗೂ ಜನರನ್ನು ಶೋಷಣೆಗೆ ಒಳಪಡಿಸುತ್ತಿದ್ದಾರೆ. ಕುಮಾರಸ್ವಾಮಿ ಅವರು ಮೀಟೂನಲ್ಲಿ ಸಿಕ್ಕಿ ಹಾಕಿಕೊಳ್ಳುತ್ತಾರೆ. ಶೋಷಣೆಯಾದವರು ಮುಂದೆ ಬರುತ್ತಾರೆ. ಕುಮಾರಸ್ವಾಮಿಯವರು ಎಚ್ಚರದಿಂದ ಇರಬೇಕು ಮುಂದಿನ ದಿನಗಳಲ್ಲಿ ಅವರ ವಿರುದ್ಧವೂ ಮೀ-ಟೂ ಬಾಂಬ್ ಸಿಡಿಯುವ ಸಾಧ್ಯತೆ ಇದೆ.ರಾಧಿಕಾ ಕುಮಾರಸ್ವಾಮಿ ಅವರನ್ನು ನೀವು ಕುಟುಂಬದ ಭಾಗ ಎಂದು ಭಾವಿಸುವುದಾದರೆ, ಅವರನ್ನು ಚುನಾವಣೆಯಲ್ಲಿ ಕಣಕ್ಕಿಳಿಸಿ ಎಂದು ಸವಾಲು ಹಾಕಿದ್ದಾರೆ










