ಕನ್ನಡ ರಾಜ್ಯೋತ್ಸವಕ್ಕೆ ಶುಭಾಶಯ ಕೋರಿದ ಗಣ್ಯರು…

677
firstsuddi

ಬೆಂಗಳೂರು: ಕರ್ನಾಟಕದೆಲ್ಲೆಡೆ ಇಂದು ಕನ್ನಡ ರಾಜ್ಯೋತ್ಸವದ ಸಂಭ್ರಮ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ , ಬಿಎಸ್ ಯಡಿಯೂರಪ್ಪ,ಡಿ ಸಿ ಎಂ ಪರಮೇಶ್ವರ್ ಅವರು ಕರ್ನಾಟಕದ ಜನತೆಗೆ ಶುಭಾಶಯ ಕೋರಿದ್ದಾರೆ. 

ಕರ್ನಾಟಕ ರಾಜ್ಯೋತ್ಸವದ ಈ ದಿನದಂದು, ಕರ್ನಾಟಕದ ಜನತೆಗೆ ಹಾರ್ಧಿಕ ಅಭಿನಂದನೆಗಳು ಹಾಗೂ ಶುಭಾಶಯಗಳು. ಮುಂಬರುವ ವರ್ಷಗಳಲ್ಲಿ, ಕರ್ನಾಟಕ ರಾಜ್ಯ ಹಾಗೂ ನಮ್ಮ ದೇಶವು ಇನ್ನೂ ಉನ್ನತ ಮಟ್ಟಕ್ಕೇರಲಿ ಎಂದು ರಾಷ್ಟ್ರಪತಿ ಕೊವಿಂದ್ ಅವರು ಟ್ವೀಟ್ ಮೂಲಕ ಶುಭಾಶಯ ಕೋರಿದ್ದಾರೆ.


ರಾಜ್ಯೋತ್ಸವದ ವಿಶೇಷ ಸಂದರ್ಭದಲ್ಲಿ ಕರ್ನಾಟಕದ ನನ್ನ ಸಹೋದರ ಸಹೋದರಿಯರಿಗೆ ಶುಭಾಶಯಗಳು. ಕರ್ನಾಟಕ ಶ್ರೀಮಂತ ಇತಿಹಾಸ ಹೊಂದಿದ್ದು, ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ ಪ್ರತಿಭಾವಂತರಿಗೆ ನೆಲೆಯಾಗಿದೆ. ನಾನು ರಾಜ್ಯದ ಜನರ ಸಂತೋಷ ಹಾಗೂ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಹರಿವ ನದಿಗಳಿಂದ ಹರಸೊ ರಸಋಷಿಗಳಿಂದ ಬರೆವ ಕವಿಗಳಿಂದ ಧನ್ಯ ನೀನು ಸವಿಯ ನುಡಿಯ ಆಡುವ ಅಮೃತ ಸವಿಯ ಸವಿಯುವ ಕನ್ನಡಿಗರು ನಾವು ಧನ್ಯ ಧನ್ಯ ಕನ್ನಡ ದಿನದ ಶುಭಾಶಯ. ಎಂದು ಬಿ.ಎಎಸ್ ಯಡಿಯೂರಪ್ಪ ಅವರು ತಿಳಿಸಿದ್ದಾರೆ.

 


ಕನ್ನಡ ರಾಜ್ಯೋತ್ಸವ ಕೇವಲ ಉತ್ಸವ ಅಲ್ಲ, ವಿವಿಧ ಪ್ರಾಂತ್ಯಗಳಲ್ಲಿ ಹಂಚಿಹೋಗಿರುವ ಕನ್ನಡಿಗರು ಕನ್ನಡದ ಕರುಳಬಳ್ಳಿ ಹಿಡಿದು ಒಗ್ಗೂಡಿದ ಪವಿತ್ರ ದಿನ.ಈ ಕನ್ನಡದ ಕನಸು ಸಾಕಾರಗೊಳ್ಳಲು ಲಕ್ಷಾಂತರ ಕನ್ನಡಾಭಿಮಾನಿಗಳ ಶ್ರಮ, ತ್ಯಾಗ, ಬಲಿದಾನಗಳನ್ನು ಕೃತಜ್ಞತೆಯಿಂದ ಸ್ಮರಿಸೋಣ. ಕನ್ನಡಾಭಿಮಾನ ಕನ್ನಡ ರಾಜ್ಯೋತ್ಸವಕ್ಕೆ ಸೀಮಿತವಾಗಬಾರದು. ಅದು ಸದಾ ನಮ್ಮೆದೆಯೊಳಗೆ ಜೀವಂತವಾಗಿರಬೇಕು. ಭಾಷೆಯ ಜತೆ ನಾಡು ಸರ್ವಾಂಗೀಣವಾಗಿ ಬೆಳೆಯಬೇಕು. ಕನ್ನಡಿಗರು ಸಮರ್ಥರಾದರೆ ಕನ್ನಡ ಸಾಮರ್ಥ್ಯ ಪಡೆಯುತ್ತದೆ. ಈಗಿನ ಕರ್ನಾಟಕವನ್ನು ನಿಜವಾದ ಕನ್ನಡನಾಡಾಗಿ ಕಟ್ಟುವ ಸಂಕಲ್ಪ ಮಾಡೋಣ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭಾಶಯ ಕೋರಿದ್ದಾರೆ.

ತಾಯ್ನಾಡು, ತಾಯ್ನುಡಿಯ ಮುಂದೆ ಎಲ್ಲವೂ ತೃಣ!ತೀರಿಸಲಾದೀತೆ ಆ ಕನ್ನಡಮ್ಮನ ಋಣ!ಸಿರಿಗನ್ನಡಂ ಗೆಲ್ಗೆ ಎಂಬುದಾಗಲಿ ನಮ್ಮೆಲ್ಲರ ಅಂಬೋಣ!ನಾಡಿನ ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು ಎಂದು ಟ್ವೀಟ್ ಮೂಲಕ ಡಾ.ಜಿ ಪರಮೆಶ್ವರ್ ಅವರು ರಾಜ್ಯೋತ್ಸವದ ಶುಭಾಶಯ ತಿಳಿಸಿದ್ದಾರೆ.