ಬೆಂಗಳೂರು: ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾಮಲೈ ಅವರು ತಮ್ಮ ಪೊಲೀಸ್ ಸಿಬ್ಬಂದಿಗೆ ಸಿಹಿ ಸುದ್ದಿ ನೀಡಿದ್ದಾರೆ. ಪೊಲೀಸ್ ಕಾನ್ಸ್ಟೆಬಲ್, ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಗಳಿಗೆ ವಾರದ ರಜೆಯನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದ್ದಾರೆ. ವರ್ಷದಲ್ಲಿ 15 ದಿನಗಳ ಸಾಂದರ್ಭಿಕ ರಜೆಗೂ ಅನುಮತಿ ನೀಡಿದ್ದಾರೆ. 15ಕ್ಕಿಂತ ಹೆಚ್ಚು ಬೇಕಿದ್ದರೆ ಡಿಸಿಪಿಯನ್ನು ಸಂಪರ್ಕಿಸಲು ಸೂಚನೆ ನೀಡಿದ್ದಾರೆ. ಪೊಲೀಸ್ ಸಿಬ್ಬಂದಿಗಳಿಗೆ ಡಿಸಿಪಿ ಅಣ್ಣಾಮಲೈ ಅವರ ಆದೇಶ ಭಾರೀ ಖುಷಿ ತಂದಿದೆ.











