ಹಾಸನ: ವರ್ಷಕ್ಕೊಮ್ಮೆ ಬಾಗಿಲು ತೆಗೆಯುವ ಹಾಸನಾಂಬ ದೇವಾಲಯದ ಬಾಗಿಲನ್ನು ನಿನ್ನೆಮಧ್ಯಾಹ್ನ ತೆರೆಯಲಾಗಿದ್ದು, ಮೊದಲ ದಿನ ಸಾರ್ವಜನಿಕರಿಗೆ ದೇವಿಯ ದರ್ಶನಕ್ಕೆ ಅವಕಾಶ ನೀಡಿರಲಿಲ್ಲ. ಆದರೆ ಇಂದು ಮುಂಜಾನೆ 6ಗಂಟೆಯಿಂದ ದೇವಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಚನ್ನಮ್ಮ ದಂಪತಿ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಅನಿತಾ ದಂಪತಿ ಕುಮಾರಸ್ವಾಮಿ ಅವರು ಹಾಸನಾಂಬೆ ದೇವಿಯ ದರ್ಶನ ಪಡೆಯಲಿದ್ದಾರೆ.










