ಪ್ರಿಯಕರನ ಚಾಲೆಂಜ್ ಸ್ವೀಕರಿಸಿ ಮೃತಪಟ್ಟ ಪ್ರಿಯತಮೆ…

320
firstsuddi

ಬೆಂಗಳೂರು: ಪ್ರಿಯಕರ ಮಾಡಿದ ಚಾಲೆಂಜ್ ಸ್ವೀಕರಿಸಲು ಹೋಗಿ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಿತ್ತಿಗನೂರು ಗ್ರಾಮದಲ್ಲಿ ಕಳೆದ ಮಂಗಳವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ದಿವ್ಯಾ(19) ಮೃತ ಯುವತಿ. ಪ್ರಿಯಕರ ಹರೀಶ್(20) “ನನ್ನ ಮೇಲೆ ನಿನಗೆ ನಿಜವಾದ ಪ್ರೀತಿ ಇದ್ದರೆ ವಿಷ ಕುಡಿ”ಎಂದು ತನ್ನ ಪ್ರೇಯಸಿಗೆ ಚಾಲೆಂಜ್ ಮಾಡಿದ್ದಾನೆ. ಹರೀಶ್ ಮಾತನ್ನು ಗಂಭೀರವಾಗಿ ಪರಿಗಣಿಸಿ ದಿವ್ಯ ವಿಷ ಕುಡಿದಿದ್ದಾಳೆ. ಅಸ್ವಸ್ಥಗೊಂಡಿದ್ದ ದಿವ್ಯಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತಪಟ್ಟಿದ್ದಾಳೆ.ಪ್ರಿಯಕರ ಹರೀಶ್ ವಿರುದ್ಧ ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.