ಬೆಂಗಳೂರು: ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಆನ್ಲೈನ್ ಮದ್ಯ ಮಾರಾಟವನ್ನು ಕೂಡಲೇ ನಿಲ್ಲಿಸುವಂತೆ ಸೂಚಿಸಿದ್ದೇನೆ. ಆನ್ಲೈನ್ ಮದ್ಯ ಮಾರಾಟ ಹಿಂದಿನ ಸರ್ಕಾರದ ಅವಧಿಯಲ್ಲಿ ಕೈಗೊಂಡ ನಿರ್ಧಾರ.ಈಗ ಅದನ್ನು ನಿಲ್ಲಿಸುವಂತೆ ಸೂಚಿಸಿದ್ದೇನೆ.ಇದರಿಂದ ಮಧ್ಯವರ್ತಿಗಳ ಲಾಭಕ್ಕೆ ಅವಕಾಶ ನೀಡಲಾಗುವುದಿಲ್ಲ. ಸಂಬಂಧಪಟ್ಟ ಕಡತಗಳನ್ನು ಪರಿಶೀಲಿಸಿ ಆನ್ಲೈನ್ ಮದ್ಯ ಮಾರಾಟ ತಡೆಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.










