ಬೆಂಗಳೂರು: ಕೆಪಿಸಿಸಿ ಮಹಿಳಾ ಘಟಕದ ನೂತನ ಅಧ್ಯಕ್ಷೆಯಾಗಿ ಮೈಸೂರಿನ ಪುಷ್ಪ ಅಮರ್ ನಾಥ್ ಅವರು ನೇಮಕಗೊಂಡಿದ್ದಾರೆ. ಪುಷ್ಪಾ ಅಮರ್ ನಾಥ್ ಅವರನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಶೋಕ್ ಗೆಹ್ಲೋಟ್ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಮುಂದುವರೆಸಬೇಕೆಂದು ರಾಜ್ಯದ ಕೆಲ ಕಾಂಗ್ರೆಸ್ ನಾಯಕರು ಹೈಕಮಾಂಡ್ ಮೇಲೆ ಒತ್ತಡ ಹೇರಿದ್ದರು ಎನ್ನಲಾಗಿದ್ದು, ಮನವಿಯನ್ನು ತಿರಸ್ಕರಿಸಿರುವ ಹೈಕಮಾಂಡ್ ಪುಷ್ಪಾ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.










