ತಿರುವನಂತಪುರ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಹಿನ್ನಲೆ ಇಂದು ಸಂಜೆ 5ಗಂಟೆಗೆ ದೇಗುಲದ ಬಾಗಿಲು ತೆರೆಯಲಿದ್ದು, ವಿಶೇಷ ಪೂಜೆ ನಡೆಯಲಿದೆ. ಮುಂಜಾಗ್ರತಾ ಕ್ರಮವಾಗಿ ದೇಗುಲದ ಬಳಿ, ಪಂಪಾ, ನಿಲಕ್ಕಲ್,ಸನ್ನಿಧಾನಂ, ಹಾಗೂ ಎಲವುಂಕಾಲ್ನಲ್ಲಿ ಸೆಕ್ಷನ್ 144 ಜಾರಿಗೊಳಿಸಿದ್ದು, ಕಳೆದ ಬಾರಿ ಶಬರಿಮಲೆ ದೇವಸ್ಥಾನದ ಬಾಗಿಲು ತೆರೆದಾಗ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು . ಈ ಹಿನ್ನಲೆ ಈ ಬಾರಿ ಯಾವುದೇ ಅಹಿತಕರ ಘಟನೆ ನಡೆಯಂತೆ ತಡೆಯಲು ದೇವಸ್ಥಾನದ ಸುತ್ತಮುತ್ತ ಬಿಗಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಪಂಬಾ, ನಿಲಕ್ಕಲ್ಹಾಗೂ ಪಟ್ಟನಂತಿಟ್ಟ ಪ್ರದೇಶದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.










