ಸಂಪೂರ್ಣ ಸಮನ್ವಯವೇ ಮಿತ್ರಪಕ್ಷಗಳ ಅಭ್ಯರ್ಥಿಗಳ ಗೆಲುವಿಗೆ ಕಾರಣ :ಸಿದ್ದರಾಮಯ್ಯ ಟ್ವಿಟ್…

461
firstsuddi

ಬೆಂಗಳೂರು: ಬಳ್ಳಾರಿಯಲ್ಲಿ ನರಕಚತುರ್ದಶಿಯ ಅರ್ಥಪೂರ್ಣ ಆಚರಣೆ. ಕತ್ತಲೆಯಿಂದ ಬೆಳಕಿನ ಕಡೆಗೆ ಜನಪಯಣ. ನಾಡಬಾಂಧವರಿಗೆ ದೀಪಾವಳಿಯ ಶುಭಾಶಯಗಳು ಎಂದು ಮೊದಲು ಮಾಜಿ ಮುಖ್ಯಮಂತ್ರಿ   ಟ್ವೀಟ್‌ ಮಾಡಿದ್ದು,2 ನೇ ಟ್ವೀಟ್‌ನಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ನಡುವಿನ ಸಂಪೂರ್ಣ ಸಮನ್ವಯವೇ ಮಿತ್ರಪಕ್ಷಗಳ ಅಭ್ಯರ್ಥಿಗಳ ಗೆಲುವಿಗೆ ಕಾರಣ ಎಂದಿದ್ದಾರೆ.3ನೇ ಟ್ವೀಟ್‌ನಲ್ಲಿ ಜಮಖಂಡಿ ವಿಧಾನಸಭಾ ಉಪಚುನಾವಣೆಯಲ್ಲಿ ಜಯಗಳಿಸಿರುವ ಆನಂದ ನ್ಯಾಮಗೌಡ ಅವರಿಗೆ ಅಭಿನಂದನೆಗಳು. ಪಕ್ಷದ ಜಯಕ್ಕಾಗಿ ಶ್ರಮಿಸಿದ ನಾಯಕರು ಹಾಗೂ ಕಾರ್ಯಕರ್ತರಿಗೆ ಧನ್ಯವಾದಗಳು. ನಮ್ಮ ಅಭ್ಯರ್ಥಿಯನ್ನು ಆಶೀರ್ವದಿಸಿದ ಕ್ಷೇತ್ರದ ಮತದಾರರಿಗೆ ಕೃತಜ್ಞತೆಗಳು ಎಂದು ಟ್ವಿಟ್ ಮಾಡಿದ್ದಾರೆ.