ಮುಂದಿನ ಚುನಾವಣೆಯಲ್ಲಿ ಗೆಲ್ಲುವುದೇ ನಮ್ಮ ಗುರಿ: ಬಿ ಎಸ್ ಯಡಿಯೂರಪ್ಪ…

242
firstsuddi

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ವಿಜೇತ ಅಭ್ಯರ್ಥಿ ಬಿ. ವೈ ರಾಘವೇಂದ್ರ ಅವರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಬಿ ಎಸ್ ಯಡಿಯೂರಪ್ಪ ಅವರು ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಗೆಲುವು ಲಭಿಸಿದೆ. ಆದರೆ ಬಳ್ಳಾರಿ, ಜಮಖಂಡಿಯಲ್ಲಿ ನಿರೀಕ್ಷೆಯ ಫಲಿತಾಂಶ ಲಭಿಸಿಲ್ಲ. ಮೈತ್ರಿ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡು ಚುನಾವಣೆಯಲ್ಲಿ ಗೆದ್ದಿದ್ದಾರೆ .ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವುದೇ ನಮ್ಮ ಗುರಿ. ಮಂಡ್ಯದಲ್ಲಿ ಬಿಜೆಪಿ ಅಸ್ತಿತ್ವವೇ ಇರಲಿಲ್ಲ  ಆದರೆ ಈ ಬಾರಿ ಬಿಜೆಪಿ ಅಭ್ಯರ್ಥಿ ಡಾ.ಸಿದ್ದರಾಮಯ್ಯ ಅವರು ಬಿಜೆಪಿಗೆ ಹೆಚ್ಚು ಮತ ಪಡೆದಿರುವುದು ಸಂತೋಷ ತಂದಿದೆ. ಶಿವಮೊಗ್ಗ ಉಪಚುನಾವಣೆಯಲ್ಲಿ ಬಿ. ವೈ. ರಾಘವೇಂದ್ರ ಅವರನ್ನು ಗೆಲ್ಲಿಸಿದ ಮತದಾರರಿಗೆ ಹಾಗೂ ಕಾರ್ಯಕರ್ತರಿಗೆ ಧನ್ಯವಾದಗಳು ಎಂದಿದ್ದಾರೆ.