ಜನಾರ್ದನ ರೆಡ್ಡಿಗೆ ಮತ್ತೆ ಸಂಕಷ್ಟ ತಂದಿಟ್ಟ ಹಳೆಯ ಡೀಲ್ ಪ್ರಕರಣ…

281
firstsuddi

ಬೆಂಗಳೂರು: ಮಾಜಿ ಸಚಿವ, ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿ ಅವರಿಗೆ  ಮತ್ತೊಂದು ಸಂಕಷ್ಟ ಎದುರಾಗಿದ್ದು, ಜನಾರ್ದನ ರೆಡ್ಡಿಯವರು ರದ್ದಾದ ನೋಟುಗಳನ್ನು ಅಕ್ರಮವಾಗಿ ವರ್ಗಾಯಿಸಿಕೊಂಡಿದ್ದಾರೆ.ಆಂಬಿಡೆಂಟ್ ಗ್ರೂಪ್ ಕಚೇರಿಯಲ್ಲಿ ನೋಟ್ ಬ್ಯಾನ್ ಆಗಿದ್ದ ವೇಳೆ ರೆಡ್ಡಿ ಆಪ್ತ ಸಹಾಯಕ ಅಲಿಖಾನ್ 57 ಕೆಜಿ ಚಿನ್ನದ ಗಟ್ಟಿಯನ್ನು ವರ್ಗಾವಣೆ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿದ್ದು,  ಇದೀಗ ಸಿಸಿಬಿ ಪೊಲೀಸರು ತನಿಖೆಯನ್ನು ಚುರುಕುಗೊಂಡಿದ್ದು, ತಲೆ ಮರೆಸಿಕೊಂಡಿರುವ ಜನಾರ್ದನ ರೆಡ್ಡಿಯನ್ನು ಹಾಗೂ ಆಪ್ತ ಅಲಿಖಾನ್​ ಗೆ ಸಿಸಿಬಿ ಬಲೆ ಬೀಸಿದ್ದಾರೆ.