ಕೇಂದ್ರ ಸಚಿವ ಅನಂತ್‌ ಕುಮಾರ್‌ ವಿಧಿವಶ…

244
firstsuddi

ಬೆಂಗಳೂರು:ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ  ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಹೆಚ್.ಎನ್. ಅನಂತಕುಮಾರ್(59) ಅವರು  ಇಂದು   ಬೆಳಗಿನ ಜಾವ ಬೆಂಗಳೂರಿನ  ಖಾಸಗಿ ಆಸ್ಪತ್ರೆ  ವಿಧಿವಶರಾಗಿದ್ದು, ಆಸ್ಪತ್ರೆಯಿಂದ ಲಾಲ್ ಬಾಗ್ ರಸ್ತೆಯಲ್ಲಿರುವ ಸುಮೇರ ನಿವಾಸಕ್ಕೆ ಅನಂತ್​ ಕುಮಾರ್​ ಅವರ ಪಾರ್ಥಿವ ಶರೀರ ರವಾನೆಯಾಗಿದೆ. ನಂತರ ಪಾರ್ಥೀವ ಶರೀರದ ದರ್ಶನಕ್ಕೆ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದೆ.

 1959 ಜುಲೈ 22ರಂದು ಬೆಂಗಳೂರಿನಲ್ಲಿ  ಎಚ್. ಎನ್. ನಾರಾಯಣ ಶಾಸ್ತ್ರಿ, ಗಿರಿಜಾ ಶಾಸ್ತ್ರಿ ದಂಪತಿಗಳ ಪುತ್ರರಾಗಿ ಅನಂತ್ ಕುಮಾರ್  ಅವರು  ಜನಿಸಿದರು. ಹುಬ್ಬಳ್ಳಿಯ ಕೆಎಸ್ ಕಲಾ ಕಾಲೇಜಿನಲ್ಲಿ ಬಿ.ಎ ಪದವಿ ಪಡೆದಿದ್ದರು. ಜೆಎಸ್ಎಸ್ ವಿವಿಯಲ್ಲಿ ಕಾನೂನು ಪದವಿ ಪಡೆದಿದ್ದ ಅನಂತ್ ಕುಮಾರ್ ಅವರು ಆರು ಬಾರಿ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದರು.ಅಟಲ್‌ ಬಿಹಾರಿ ವಾಜಪೇಯಿ ಸರಕಾರದಲ್ಲಿ ಸಚಿವರಾಗಿದ್ದ ಅನಂತ್‌ ಕುಮಾರ್‌ ಅವರು    ಕೇಂದ್ರ ನಾಗರಿಕ ವಿಮಾನಯಾನ ಖಾತೆ ನಿಭಾಯಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಸಚಿವರಾಗಿದ್ದ ಅನಂತಕುಮಾರ್ ಅವರು  ಬಿಜೆಪಿಯ ಅಗ್ರಗಣ್ಯ ನಾಯಕರಲ್ಲಿ ಒಬ್ಬರಾಗಿದ್ದರು.