ಗಜ ಚಂಡಮಾರುತದ ಪ್ರಭಾವದಿಂದ ಬೆಂಗಳೂರಿನಲ್ಲಿ  ಮಳೆ ಸಾಧ್ಯತೆ…

184
firstsuddi

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಗಜ ಚಂಡಮಾರುತದ ಪರಿಣಾಮ ಇನ್ನು 24 ಗಂಟೆಗಳಲ್ಲಿ  ಆಂಧ್ರಪ್ರದೇಶ ಮತ್ತು ತಮಿಳುನಾಡು ಕರಾವಳಿಗೆ ಗಜ ಚಂಡಮಾರುತ ಅಪ್ಪಳಿಸಲಿದ್ದು, ಗಜ ಚಂಡಮಾರುತದ ಪ್ರಭಾವದಿಂದ ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ನವೆಂಬರ್ 15, ನವೆಂಬರ್ ಮತ್ತು  16ರಂದು ಮಳೆಯಾಗುವ ಸಾಧ್ಯತೆ ಇದ್ದು,  ರಾಜ್ಯದ  ಬೆಂಗಳೂರು, ರಾಮನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಹಾಗೂ  ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಇನ್ನೆರೆಡು ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.  ಎಂದು ನೈಸರ್ಗಿಕ ವಿಕೋಪ, ವಿಪತ್ತು ನಿರ್ವಹಣಾ ಮಂಡಳಿ ನಿರ್ದೇಶಕ ಶ್ರೀನಿವಾಸ ರೆಡ್ಡಿ ಅವರು ತಿಳಿಸಿದ್ದಾರೆ.