ಬೆಂಗಳೂರು : ಆ್ಯಂಬಿಡೆಂಟ್ ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ನಿನ್ನೆ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯವು ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬಳಿಕ ತೀರ್ಪನ್ನು ಇಂದಿಗೆ ಕಾಯ್ದಿರಿಸಿದೆ. ಜನಾರ್ದನ ರೆಡ್ಡಿಗೆ ಜೈಲಾ..? ಬೇಲಾ..? ಎಂಬ ನ್ಯಾಯಾಲಯದ ತೀರ್ಪನ್ನು ಕಾದು ನೋಡಬೇಕಿದೆ.










