ಇಂದು ತಮಿಳುನಾಡಿಗೆ  ಅಪ್ಪಳಿಸಲಿದೆ ‘ಗಜ’ ಚಂಡಮಾರುತ…

365
firstsuddi

ಚೆನ್ನೈ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಗಜ ಚಂಡಮಾರುತ ಇಂದು ತಮಿಳುನಾಡು ಮತ್ತು ಪುದುಚೇರಿಗೆ ಅಪ್ಪಳಿಸಲಿದ್ದು, ಗಂಟೆಗೆ 100 ಕಿ.ಮೀ. ವೇಗದಲ್ಲಿ ಪಂಬನ್‌ -ಕಡಲೂರು ತೀರ ಪ್ರವೇಶಿಸಲಿದೆ. ತಮಿಳುನಾಡು ಮತ್ತು ಪುದುಚೇರಿ ಕರಾವಳಿ ತೀರ ಪ್ರದೇಶಗಳಲ್ಲಿ ಭಾರಿ ಮಳೆಯಾಗಲಿದೆ  ಎಂದು ಹವಾಮಾನ ಇಲಾಖೆ ತಿಳಿಸಿದೆ.  ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ಕ್ರಮವಾಗಿ  ತಂಜಾವೂರು, ತಿರುವೂರು, ಕಡಲೂರು, ರಾಮನಾಥಪುರಂ, ನಾಗಪಟ್ಟಣಂ, ಪುದುಕೊಟ್ಟಾಯ್ ​ಗಳ  ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದೆ. ತಮಿಳುನಾಡಿನ ಉತ್ತರ ಕರಾವಳಿ ಭಾಗದಲ್ಲಿ ಗಜ ಚಂಡಮಾರುತ ಅಪ್ಪಳಿಸಲಿದೆ. ಹೀಗಾಗಿ ಮೀನುಗಾರರಿಗೆ ಸಮುದ್ರ ತೀರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.