ಡಿಸೆಂಬರ್ ನಲ್ಲಿ ನಡೆಯಲಿದೆ ನಟ ಧ್ರುವ ಸರ್ಜಾ ನಿಶ್ಚಿತಾರ್ಥ…

459
firstsuddi

ಬೆಂಗಳೂರು :ಸ್ಯಾಂಡಲ್ ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಮುಂದಿನ ತಿಂಗಳು ಅಂದರೆ ಡಿಸೆಂಬರ್ 9 ರಂದು ತಮ್ಮ ಬಹುದಿನದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ . ನಾನು ಲವ್ ಮ್ಯಾರೇಜ್ ಆಗೋದು ಎಂದಿದ್ದ  ಧ್ರುವ ಸರ್ಜಾ ಅವರು  ಅದರಂತೆ ಪ್ರೀತಿಸಿದ ಹುಡುಗಿಯ ಜೊತೆಗೆ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ. ಧ್ರುವ ಸರ್ಜಾ ಅವರ ನಿಶ್ಚಿತಾರ್ಥಕ್ಕೆ ಸಕಲ ಸಿದ್ಧತೆ  ನಡೆಯುತ್ತಿದ್ದು,ಬೆಂಗಳೂರಿನ ಬನಶಂಕರಿಯ ಲಕ್ಷ್ಮಿ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ನಿಶ್ಚಿತಾರ್ಥ ನಡೆಯಲಿದೆ ಎಂದು ತಿಳಿದು ಬಂದಿದ್ದು,  ಧ್ರುವ ಸರ್ಜಾ ವರಿಸಲಿರುವ ಹುಡುಗಿ ಯಾರು ಎಂಬ ಮಾಹಿತಿ ಲಭ್ಯವಾಗಿಲ್ಲ.