ಮದುವೆಗೆಂದು ಮನೆಯಲ್ಲಿಟ್ಟಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ಹಣ ಕಳವು…

213
firstsuddi

ಮೈಸೂರು: ಮದುವೆಗೆಂದು ಮನೆಯಲ್ಲಿ ಇಟ್ಟಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣ, ಹಾಗೂ ಹಣವನ್ನು ಕಳ್ಳನೊಬ್ಬ ಕದ್ದು ಪರಾರಿಯಾಗಿರುವ  ಘಟನೆ ರಾಜೀವ್ ನಗರದಲ್ಲಿ ನಡೆದಿದೆ.ಇಲಿಯಾಸ್ ಕಾವೇರಿ ಎಂಪೋರಿಯಮ್ ಮಾಲೀಕರಾದ ಇಲಿಯಾಸ್ ಬೇಗ್  ಎಂಬುವರು ಮಗಳ  ಮದುವೆಗೆಂದು ಮನೆಯಲ್ಲಿ 25 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 2.50 ಲಕ್ಷ ರೂ. ನಗದು  ಇಟ್ಟಿದ್ದರು. ಮದುವೆಯ ಸಂಭ್ರಮದಲ್ಲಿದ್ದ ಕುಟುಂಬಸ್ಥರು ಹೊರಗೆ ಹೋಗಿದ್ದ ಸಂದರ್ಭದಲ್ಲಿ ಕಳ್ಳ ಮನೆಯ ನಕಲಿ ಕೀ ಬಳಸಿ ಮನೆಯಲ್ಲಿದ್ದ  ಲಕ್ಷಾಂತರ ಮೌಲ್ಯದ ಚಿನ್ನಾಭರಣ,ಹಾಗೂ ಹಣವನ್ನು ಕದ್ದು ಪರಾರಿಯಾಗಿದ್ದಾನೆ. ಕಳ್ಳ ಮಾಸ್ಕ್, ಶಲ್ಯ ಧರಿಸಿ  ಮನೆಗೆ ಬಂದು  ಕಳ್ಳತನ ಮಾಡಿ ಪರಾರಿಯಾದ ದೃಶ್ಯ  ಮನೆಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.