ಇಂದು “ಬಡವರ ಬಂಧು” ಯೋಜನೆಗೆ ಸಿ.ಎಂ ಚಾಲನೆ…

243
firstsuddi

ಬೆಂಗಳೂರು: ರಾಜ್ಯದ 52 ಸಾವಿರ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ನೀಡುವ  “ಬಡವರ ಬಂಧು” ಯೋಜನೆಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಚಾಲನೆ ನೀಡಿದರು. ಬೀದಿಬದಿ ವ್ಯಾಪಾರಿಗಳಿಗೆ ಚೆಕ್ ವಿತರಿಸಿದರು. ನಗರದ ಎ.ಪಿ.ಎಂ.ಸಿ ತರಕಾರಿ ಮಾರುಕಟ್ಟೆ ಬಳಿ ಸಮಾರಂಭಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಚಾಲನೆ ನೀಡಿದ್ದು, ಬಡ ಜನತೆ ಸಾಲ ಸೌಲಭ್ಯಕ್ಕಾಗಿ ಮೀಟರ್​ ಬಡ್ಡಿ ದಂಧೆಗೆ ಕಡಿವಾಣ ಹಾಕುವ ಉದ್ದೇಶದಿಂದ ಬಜೆಟ್‌ನಲ್ಲಿ ಘೋಷಿಸಿದ್ದ ಈ ಯೋಜನೆಯನ್ನು ಇದೀಗ ಅನುಷ್ಠಾನಕ್ಕೆ ತರಲಾಗುತ್ತಿದೆ.ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ , ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ್ ಹಾಗೂ ಬಿಬಿಎಂಪಿ ಮೇಯರ್ ಗಂಗಾಬಿಕೆ ಉಪಸ್ಥಿತರಿದ್ದರು.

firstsuddi