ಕೂದುವಳ್ಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಟಿ.ಎಂ.ವಸಂತಾ ಕುಮಾರೇಗೌಡ ಅಧ್ಯಕ್ಷೆಯಾಗಿ ಆಯ್ಕೆ…

672
firstsuddi

ಚಿಕ್ಕಮಗಳೂರು: ತಾಲ್ಲೂಕಿನ ಕೂದುವಳ್ಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಇದೇ ಮೊದಲ ಬಾರಿಗೆ ಮಹಿಳೆಯೋರ್ವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.1974 ರಲ್ಲಿ ಆರಂಭಗೊಂಡಿರುವ ಈ ಸಂಘಕ್ಕೆ ಕಳೆದ ನಾಲ್ಕು ದಶಕಗಳಲ್ಲಿ ಯಾರೊಬ್ಬ ಮಹಿಳೆಯೂ ಅಧ್ಯಕ್ಷರಾಗಿ ಆಯ್ಕೆಯಾಗಿರಲಿಲ್ಲ.ಗುರುವಾರ ನಡೆದ ಚುನಾವಣೆಯಲ್ಲಿ ಟಿ.ಎಂ.ವಸಂತಾ ಕುಮಾರೇಗೌಡ ಅಧ್ಯಕ್ಷರಾಗಿ ಹಾಗೂ ರಾಜೇಶ್ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು.
ಬೆಳಿಗ್ಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಯಾವುದೇ ನಾಮಪತ್ರ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಹರೀಶ್ ಕುಮಾರ್. ವಸಂತಾ ಕುಮಾರೇಗೌಡ ಹಾಗೂ ರಾಜೇಶ್ ಅವರ ಅವಿರೋಧ ಆಯ್ಕೆಯನ್ನು ಪ್ರಕಟಿಸಿದರು.
ನಂತರ ನಡೆದ ಸಮಾರಂಭದಲ್ಲಿ ನೂತನ ಅಧ್ಯಕ್ಷೆ ಮತ್ತು ಉಪಾಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ತಾಲ್ಲೂಕು ಪಂಚಾಯಿತಿ ಸದಸ್ಯ ಡಿ.ಜೆ.ಸುರೇಶ್ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷಾತೀತವಾಗಿ ಕಾರ್ಯ ನಿರ್ವಹಿಸುವಂತೆ ಕಿವಿಮಾತು ಹೇಳಿದರು.
ಸಂಘಕ್ಕೆ ನೂತನ ಕಟ್ಟಡವನ್ನು ನಿರ್ಮಿಸುವ ಮೂಲಕ ಸದಸ್ಯರ ಬಹುದಿನದ ಕನಸನ್ನು ನನಸು ಮಾಡುವಂತೆ ಸಲಹೆ ಮಾಡಿದರು.
ಅಭಿನಂದನೆ ಸ್ವೀಕರಿಸಿ ಮಾತನಾಡಿದ ನೂತನ ಅಧ್ಯಕ್ಷೆ ವಸಂತಾ ಕುಮಾರೇಗೌಡ ಸಂಘವನ್ನು ಉತ್ತಮವಾಗಿ ಮುನ್ನಡೆಸಲು ಎಲ್ಲರೂ ಸಹಕರಿಸುವಂತೆ ಮನವಿ ಮಾಡಿದರು.
ಸಂಘದ ಕಾರ್ಯದರ್ಶಿ ಈರೇಗೌಡ, ಮಾಜಿ ಕಾರ್ಯದರ್ಶಿ ಲೋಕೇಶ್ ಗೌಡ, ಮಾಜಿ ಅಧ್ಯಕ್ಷರುಗಳಾದ ಕೃಷ್ಣೇಗೌಡ, ಸಿ.ಡಿ.ಭವಾನಿ ಶಂಕರ್, ಎಸ್.ಡಿ.ಉಮೇಶ್, ಟಿ.ಕೆ.ನಾರಾಯಣಗೌಡ, ನಿರ್ದೇಶಕರಾದ ವಿ.ಎನ್.ಉಮೇಶ್, ರವೀಂದ್ರ. ಶಾರದಮ್ಮ ಉಪಸ್ಥಿತದ್ದರು.