ಬೆಳಗಾವಿ: ಕಬ್ಬಿಗೆ ಸೂಕ್ತ ದರ ನಿಗದಿ ಹಾಗೂ ಬಾಕಿ ಪಾವತಿಗೆ ಆಗ್ರಹಿಸಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ಕಳೆದ ನಾಲ್ಕು ದಿನಗಳಿಂದ ಧರಣಿ ನಡೆಸುತ್ತಿದ್ದ ರೈತರ ಮನವೊಲಿಸುವಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಅವರು ಯಶಸ್ವಿಯಾಗಿದ್ದಾರೆ.ಡಿ.ಕೆ.ಶಿವಕುಮಾರ್ ಅವರು ರೈತರು ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ತೆರಳಿ ರೈತರ ಜೊತೆ ಕುಳಿತು ಬೇಡಿಕೆಗಳನ್ನು ಈಡೇರಿಸುವ ಜವಾಬ್ದಾರಿ ನನ್ನದು ಎಂದು ಭರವಸೆ ನೀಡಿದ್ದಾರೆ. ಹಾಗೂ ಪ್ರತಿಭಟನೆಯನ್ನು ಹಿಂಪಡೆಯುವಂತೆ ಮನವಿ ಮಾಡಿಕೊಂಡರು. ಡಿ.ಕೆ.ಶಿವಕುಮಾರ್ ಅವರ ಸಂಧಾನಕ್ಕೆ ರೈತ ಮುಖಂಡ ಸಿದ್ದನಗೌಡ ಹಾಗೂ ಜಯಶ್ರೀ ಅವರು ಸೇರಿದಂತೆ ಅನೇಕ ರೈತರು ಒಪ್ಪಿ ಪ್ರತಿಭಟನೆಯನ್ನು ಹಿಂಪಡೆದರು.










