ಮಂಡ್ಯ ಬಸ್ ಅಪಘಾತಕ್ಕೆ ​ ಸಂತಾಪ ಸೂಚಿಸಿದ ಗಣ್ಯರು…

310
firstsuddi

ಮಂಡ್ಯ :ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟ್ ಮೂಲಕ ಸಂತಾಪ ಸೂಚಿಸಿದ್ದು, ಮಂಡ್ಯದಲ್ಲಿ ಬಸ್​ ನಾಲೆಗೆ ಉರುಳಿ ಪ್ರಯಾಣಿಕರು ಮೃತಪಟ್ಟಿರುವುದು ದುಃಖದ ಸಂಗತಿ . ಮೃತರ ಕುಟುಂಬಗಳಿಗೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ. 

ರಾಹುಲ್ ಗಾಂಧಿ ಅವರು ಟ್ವಿಟ್ ಮೂಲಕ ಸಂತಾಪ ಸೂಚಿಸಿದ್ದು, ಕರ್ನಾಟಕದ ಮಂಡ್ಯ ಜಿಲ್ಲೆಯಲ್ಲಿ ಬಸ್ ಅಪಘಾತದಲ್ಲಿ 20ಕ್ಕೂ ಹೆಚ್ಚು ಜನರು ಮೃತಪಟ್ಟು ಹಲವರು ಗಾಯಗೊಂಡಿರುವುದು ನಿಜಕ್ಕೂ ಆಘಾತಕಾರಿ ಸಂಗತಿ. ಈ ಅಪಘಾತದಲ್ಲಿ ಮೃತಪಟ್ಟ ಕುಟುಂಬಗಳಿಗೆ ನಾನು ಸಂತಾಪ ಸೂಚಿಸುತ್ತೇನೆ ಮತ್ತು ಗಾಯಗೊಂಡವರು ಬೇಗನೆ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಟ್ವಿಟ್ ಮೂಲಕ ಮಂಡ್ಯ ಜಿಲ್ಲೆಯ ಕನಗನಮರಡಿ ಬಳಿ ನಾಲೆಗೆ ಬಸ್ ಬಿದ್ದು 15ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಕುರಿತು ಸಿಎಂ ಕುಮಾರಸ್ವಾಮಿ ದಿಗ್ಭ್ರಮೆ ವ್ಯಕ್ತ ಪಡಿಸಿದ್ದಾರೆ.ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದು, ಸ್ಥಳಕ್ಕೆ ಕೂಡಲೇ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆ ನಡೆಸುವ ಬಗ್ಗೆ ಸೂಚನೆಗಳನ್ನು ನೀಡಿದ್ದಾರೆ.

ಹೆಚ್ ಡಿ ದೇವೇಗೌಡ ಅವರು ಟ್ವಿಟ್ ಮೂಲಕ ಸಂತಾಪ ಸೂಚಿಸಿದ್ದು,ಪಾಂಡವಪುರದ ಕನಗನಮರಡಿಯ ಘೋರ ಘಟನೆ ಮನಕಲುಕಿದೆ. ಅದರಲ್ಲೂ, ಬಾಳಿ ಬದುಕಬೇಕಿದ್ದ ಮಕ್ಕಳೂ ಈ ದುರ್ಘಟನೆಯಲ್ಲಿ ಪ್ರಾಣ ಕಳೆದುಕೊಂಡಿದ್ದು ನನ್ನನ್ನು ಅತೀವ ಘಾಸಿಗೊಳಿಸಿದೆ. ಇದು ಕ್ರೂರ ವಿಧಿಯ ಅಟ್ಟಹಾಸವೇ ಸರಿ. ನೋವುಣ್ಣುತ್ತಿರುವ ಸಂತ್ರಸ್ತ ಕುಟುಂಬಗಳಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ.

ಸಿದ್ದರಾಮಯ್ಯ ಅವರು ಟ್ವಿಟ್ ಮೂಲಕ ಸಂತಾಪ ಸೂಚಿಸಿದ್ದು, ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಕನಗನಮರಡಿ ಗ್ರಾಮದ ಬಳಿ ನಾಲೆಗೆ ಖಾಸಗಿ ಬಸ್ ಉರುಳಿ 20 ಕ್ಕೂ ಅಧಿಕ ಮಂದಿ ಸಾವಿಗೀಡಾಗಿರುವುದು ಅತೀವ ನೋವುಂಟುಮಾಡಿದೆ. ಮೃತರ ಕುಟುಂಬಕ್ಕೆ ನನ್ನ ಸಂತಾಪಗಳು ಹಾಗೂ ಮುಂದೆ ಇಂತಹ ದುರ್ಘಟನೆಗಳು ಸಂಭವಿಸದಿರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವಿಟ್ ಮಾಡಿದ್ದಾರೆ.