ದಾವಣಗೆರೆ: ಪರೀಕ್ಷೆ ಬರೆಯಲು ಕೊಠಡಿಗಳಿಲ್ಲದೆ ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ಶಾಮಿಯಾನ ಹಾಕಿಸಿ ಪರೀಕ್ಷೆ ಬರೆದಿರುವ ಘಟನೆ ಹರಪನಹಳ್ಳಿ ಸರ್ಕಾರಿ ಪದವಿ ಕಾಲೇಜಿನಲ್ಲಿ ನಡೆದಿದೆ. ಕಾಲೇಜಿನಲ್ಲಿ ಎಲ್ಲಾ ವಿಭಾಗ ಸೇರಿ 1,394 ವಿದ್ಯಾರ್ಥಿಗಳಿದ್ದಾರೆ. ಆದರೆ ಕಾಲೇಜಿನಲ್ಲಿ ಕೇವಲ ಏಳು ಕೊಠಡಿಗಳಿವೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಜಾಗವಿಲ್ಲದೆ ಉಪನ್ಯಾಸಕರು ಊಟದ ಟೇಬಲ್, ಚೇರ್, ಹಾಕಿಸಿ ವಿದ್ಯಾರ್ಥಿಗಳನ್ನು ಪರೀಕ್ಷೆ ಬರೆಸಿದ್ದಾರೆ.










