ಜಾಗತೀಕರಣ, ಆಧುನೀಕರಣ ಮತ್ತು ಇಂಗ್ಲೀಷ್ ವ್ಯಾಮೋಹದಿಂದಾಗಿ ರಾಜ್ಯದಲ್ಲಿ ಕನ್ನಡ ಭಾಷೆ ಮರೆಯಾಗುತ್ತಿದೆ: ಎಸ್.ಎಸ್.ವೆಂಕಟೇಶ್…

460
firstsuddi

ಚಿಕ್ಕಮಗಳೂರು: ರಾಜ್ಯದಲ್ಲಿ ಕನ್ನಡ ಭಾಷೆ ನಶಿಸಿದರೆ ನಾಡಿನ ಉತ್ಕøಷ್ಠ ಸಂಸ್ಕøತಿ ಮತ್ತು ಪರಂಪರೆ ನಾಶವಾಗುತ್ತದೆ ಎಂದು ಜಿಲ್ಲಾ ಸುಗಮ ಸಂಗೀತ ಪರಿಷತ್ತಿನ ಅಧ್ಯಕ್ಷ ಎಸ್.ಎಸ್.ವೆಂಕಟೇಶ್ ಹೇಳಿದರು.ನಗರದ ಬಿಜಿಎಸ್ ಪದವಿಪೂರ್ವ ಕಾಲೇಜಿನಲ್ಲಿ ಶುಕ್ರವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕನ್ನಡ ಎಂದರೆ ಬರೀ ಭಾಷೆಯಲ್ಲ, ಅದು ಮನದಾಳದ ಮಾತು, ಉತ್ಕøಷ್ಠ ಸಂಸ್ಕøತಿ, ಅದಕ್ಕೆ ಎರಡು ಸಾವಿರ ವರ್ಷಗಳ ಸುಧೀರ್ಘ ಇತಿಹಾಸವಿದೆ ಅದರದೇ ಆದ ಪರಂಪರೆ ಇದೆ, ವಚನ ಸಾಹಿತ್ಯ, ದಾಸ ಸಾಹಿತ್ಯ, ಗಮಕ, ಜಾನಪದದಿಂದ ಸಮೃದ್ದವಾಗಿದೆ, ಕನ್ನಡ ಭಾಷೆ ನಶಿಸಿದರೆ ನಾವು ಇವೆಲ್ಲವನ್ನೂ ಕಳೆದುಕೊಂಡು ಅನಾಥರಾಗುತ್ತೇವೆ ಎಂದು ಎಚ್ಚರಿಸಿದರು.
ಜಾಗತೀಕರಣ, ಆಧುನೀಕರಣ ಮತ್ತು ಇಂಗ್ಲೀಷ್ ವ್ಯಾಮೋಹದಿಂದಾಗಿ ರಾಜ್ಯದಲ್ಲಿ ಕನ್ನಡ ಈಗಾಗಲೇ ಮರೆಯಾಗುತ್ತಿದೆ, ಕನ್ನಡಿಗರು ಈಗಲಾದರೂ ಎಚ್ಚೆತ್ತು ಸ್ವಾಭಿಮಾನಿಗಳಾದರೆ ಮುಂದಿನ ತಲೆಮಾರಿಗೆ ಅದು ಉಳಿಯುತ್ತದೆ ಎಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲ ಜೆ.ಜಿ.ಸುರೇಂದ್ರ ಬದಲಾದ ಇಂದಿನ ಸನ್ನಿವೇಶದಲ್ಲಿ ರಾಜ್ಯದಲ್ಲಿ ಕನ್ನಡವನ್ನು ಉಳಿಸಿ ಬೆಳೆಸುವುದು ವಿದ್ಯಾರ್ಥಿಗಳಿಂದ ಮಾತ್ರ ಸಾಧ್ಯ ಎಂದು ಹೇಳಿದರು.
ಮಾತೃಭಾಷೆಯಲ್ಲೇ ವ್ಯವಹರಿಸುವ ಮೂಲಕ ವಿದ್ಯಾರ್ಥಿಗಳು ಕನ್ನಡವನ್ನು ಉಳಿಸಬೇಕು ಎಂದು ಕಿವಿಮಾತು ಹೇಳಿದರು.
ಉಪನ್ಯಾಸಕರಾದ ಎನ್.ಆರ್.ಸಂತೋಷ್, ಸಿ.ಎನ್.ಮಂಜುನಾಥ್ ಉಪಸ್ಥಿತರಿದ್ದರು, ಸಮಾರಂಭದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ಜರುಗಿತು.
ವಿದ್ಯಾರ್ಥಿಗಳಾದ ಕೆ.ಬಿ.ನಿಶು ಮತ್ತು ಸ್ನೇಹ ಕಾರ್ಯಕ್ರಮವನ್ನು ನಿರೂಪಿಸಿದರು, ಅನನ್ಯ ಸ್ವಾಗತಿಸಿದರು, ಉಪನ್ಯಾಸಕ ಎಂ.ರಂಗಸ್ವಾಮಿ ವಂದಿಸಿದರು.