ಮಂಡ್ಯ : ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು ನಟ ಅಂಬರೀಶ್ ಅವರ ಅಂತಿಮ ದರ್ಶನಕ್ಕೆ ಬಾರದ ಹಿನ್ನೆಲೆಯಲ್ಲಿ ರಮ್ಯಾ ವಿರುದ್ಧ ಅಂಬರೀಶ್ ಅವರ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಣ್ಯ ನಾಯಕರೆಲ್ಲ ಅಂಬರೀಷ್ ಅವರ ಅಂತಿಮ ದರ್ಶನ ಪಡೆದಿದ್ದಾರೆ ಆದರೆ ರಮ್ಯಾ ಅವರಿಗೆ ರಾಜಕೀಯ ದಾರಿ ತೋರಿಸಿದ ಅಂಬರೀಶ್ ಅವರ ನಿಧನಕ್ಕೆ ಕೇವಲ ಸಾಮಾಜಿಕ ಜಾಲತಾಣದಲ್ಲಿ ಮಾತ್ರ ಟ್ವೀಟ್ ಮಾಡಿ, ಅಂತಿಮ ದರ್ಶನ ಪಡೆಯಲು ಬರದೇ ಇರುವುದು ಸಾಮಾಜಿಕ ಜಾಲತಾಣದಲ್ಲಿ ಅಂಬಿ ಅಭಿಮಾನಿಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಟ್ವಿಟ್ ಮೂಲಕ ರಮ್ಯಾ ಅವರು ಅಂಬರೀಷ್ ಅಂಕಲ್ ಅಗಲಿಕೆ ತುಂಬಾ ನೋವುಂಟು ಉಂಟು ಮಾಡಿದೆ. ಅವರ ಆತ್ಮಕ್ಕೆ ದೇವರು ಶಾಂತಿ ಕೊಡಲಿ ಹಾಗೂ ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ಕೊಡಲಿ. ಅವರ ಪ್ರೀತಿಯನ್ನು ಯಾವಾಗಲೂ ನೆನಪಿಟ್ಟುಕೊಳ್ಳುತ್ತೇನೆ ಎಂದು ಟ್ವಿಟ್ ಮಾಡಿದ್ದಾರೆ.











