ಬೆಂಗಳೂರು: ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಪ್ರಾಥಮಿಕ ಹಂತದ ಒಪ್ಪಿಗೆ ದೊರಕಿದ್ದು, ಯೋಜನೆ ವಿರೋಧಿಸಿದ್ದ ತಮಿಳುನಾಡಿಗೆ ಹಿನ್ನಡೆಯಾಗಿದೆ. ಕೇಂದ್ರ ಜಲ ಆಯೋಗ ಮೇಕೆದಾಟು ಕುಡಿಯುವ ನೀರಿನ ಯೋಜನೆ ಬಗ್ಗೆ ಸಮಗ್ರ ಯೋಜನಾ ವರದಿ ಸಿದ್ಧಪಡಿಸಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಕೇಂದ್ರ ಸರ್ಕಾರದಿಂದ ಅಧಿಕೃತ ಆದೇಶ ಪತ್ರ ದೊರೆತ ತಕ್ಷಣ ರಾಜ್ಯ ಸರ್ಕಾರ ಸಮಗ್ರ ಯೋಜನಾ ವರದಿಯನ್ನು ಕೇಂದ್ರ ಜಲ ಆಯೋಗಕ್ಕೆ ಸಲ್ಲಿಸಲಿದೆ ಎಂದು ತಿಳಿದು ಬಂದಿದೆ.










