ಬೆಂಗಳೂರು: ಕಂಠೀರವ ಸ್ಟುಡಿಯೋದಲ್ಲಿ ನಟ ಅಂಬರೀಷ್ ಅವರ ಸಮಾಧಿಗೆ ಇಂದು ಅರ್ಚಕರ ನೇತೃತ್ವದಲ್ಲಿ ಅಂಬರೀಷ್ ಅವರ ಪತ್ನಿ ಸುಮಲತಾ, ಪುತ್ರ ಅಭಿಷೇಕ್ ಹಾಗೂ ಸಂಬಂಧಿಕರು ಹಾಲು ತುಪ್ಪ ಕಾರ್ಯವನ್ನು ನೆರವೇರಿಸಿದ್ದಾರೆ .ಚಿತಾಭಸ್ಮವನ್ನು ಸಂಗ್ರಹಿಸಿ ಉಳಿದ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗುತ್ತಿದೆ. ರಾಕ್‌ಲೈನ್ ವೆಂಕಟೇಶ್, ನಟ ದೊಡ್ಡಣ್ಣ, ದರ್ಶನ್ ಸೇರಿ ಹಲವು ಗಣ್ಯರು ಮತ್ತು ಸಂಬಂಧಿಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಕಂಠೀರವ ಸ್ಟುಡಿಯೋದತ್ತ ಅಭಿಮಾನಿಗಳು ಆಗಮಿಸುತ್ತಿದ್ದು, ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.










