ಮಂಗಳೂರು:ಸಾಮೂಹಿಕ ಅತ್ಯಾಚಾರ ಎಸಗಿದ ಅಪರಾಧಿಗಳ ಪರ ವಕೀಲರು ವಾದಿಸದಂತೆ ವಕೀಲರಿಗೆ ಮನವಿ ಸಲ್ಲಿಸಿದ ವಿದ್ಯಾರ್ಥಿಗಳು…

195
firstsuddi

ಮಂಗಳೂರು:ತೋಟ ಬೆಂಗ್ರೆ ಬೀಚ್ ಗೆ ವಿಹಾರಕ್ಕೆಂದು ಬಂದಿದ್ದ ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಏಳು ಮಂದಿ ಆರೋಪಿಗಳಲ್ಲಿ ಪೊಲೀಸರು ಆರು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕು. ಬಂಧಿತ ಅಪರಾಧಿಗಳ ಪರ ವಕೀಲರು ವಾದ ಮಂಡಿಸಬಾರದು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಕಾಲೇಜು ವಿದ್ಯಾರ್ಥಿಗಳ ಸಂಘವು ಜಿಲ್ಲಾ ವಕೀಲರ ಸಂಘಕ್ಕೆ ಮನವಿ ಮಾಡಿದೆ. ಒಂದು ವೇಳೆ ಆರೋಪಿಗಳ ಪರ ವಾದ ಮಂಡಿಸಲು ಮುಂದಾದರೆ ಕಚೇರಿ ಎದುರು ಉಗ್ರ ಪ್ರತಿಭಟನೆ ನಡೆಸುವುದಾಗಿ ವಿದ್ಯಾರ್ಥಿಗಳು ತಿಳಿಸಿದ್ದಾರೆ.