ಕೆಜಿಎಫ್ ಮಾಜಿ ಶಾಸಕ ಎಂ. ಭಕ್ತವತ್ಸಲಂ ವಿಧಿವಶ…

278
firstsuddi

ಕೋಲಾರ: ಕೆಜಿಎಫ್ ಮಾಜಿ ಶಾಸಕ ಎಂ. ಭಕ್ತವತ್ಸಲಂ (70) ನಿನ್ನೆ ರಾತ್ರಿ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕೆಜಿಎಫ್‍ನ ರಾಬರ್ಟ್ ಸನ್ ಪೇಟೆಯ ನಿವಾಸದಲ್ಲಿ ಶಾಸಕ   ಎಂ. ಭಕ್ತವತ್ಸಲಂ ಅವರಿಗೆ  ರಾತ್ರಿ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣ  ಅವರನ್ನು ಜಿಲ್ಲಾ ಕೇಂದ್ರದ ಆರ್.ಎಲ್ ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ  ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 11 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ.

ಎಂ. ಭಕ್ತವತ್ಸಲಂ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಸಂತಾಪ  ಸೂಚಿಸಿದ್ದು, ಕೆಜಿಎಫ್ ಮಾಜಿ ಶಾಸಕ ಎಂ ಭಕ್ತವತ್ಸಲಂ ಅವರ ನಿಧನದ ಸುದ್ದಿ ತಿಳಿದು ತುಂಬಾ ದುಖವಾಗಿದೆ . ಕೋಲಾರ ಜಿಲ್ಲೆಯ ಕೆಜಿಎಫ್ ಕ್ಷೇತ್ರದಲ್ಲಿ ಮೂರು ಭಾರಿ ವಿಧಾನಸಭಾ ಸದಸ್ಯರಾಗಿದ್ದರು. ಎಂ ಭಕ್ತವತ್ಸಲಂ ಅಗಲಿಕೆಯನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಎಂದು ಟ್ವಿಟ್ ಮೂಲಕ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದಾರೆ.