ವಿಷ್ಣುವರ್ಧನ್ ಅವರ ಸ್ಮಾರಕ ವಿಚಾರದಲ್ಲಿ ಯಾವುದೇ ಗೊಂದಲ ಬೇಡ: ಮುಖ್ಯಮಂತ್ರಿ ಕುಮಾರಸ್ವಾಮಿ…

246
firstsuddi

ಬೆಂಗಳೂರು: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ವಿಷ್ಣುವರ್ಧನ್ ಅವರ ಸ್ಮಾರಕ ವಿಚಾರಕ್ಕೆ ಸಂಬಂಧಿಸಿದಂತೆ ಟ್ವಿಟ್  ಮಾಡಿದ್ದು, ವಿಷ್ಣುವರ್ಧನ್ ಅವರ ಸ್ಮಾರಕ ಕುರಿತ ವಿಚಾರದಲ್ಲಿ ಯಾವುದೇ ಗೊಂದಲ ಬೇಡ. ಡಾ ರಾಜಕುಮಾರ್, ವಿಷ್ಣುವರ್ಧನ್ ಹಾಗೂ ಅಂಬರೀಷ್ ರಂತಹ ಮಹನೀಯರನ್ನು ಸ್ಮರಿಸುವ ವಿಚಾರದಲ್ಲಿ ನಾನು ಬದ್ಧನಿದ್ದೇನೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅತಿ ಶೀಘ್ರದಲ್ಲಿ ವಿಷ್ಣುವರ್ಧನ್ ಅವರ ಸ್ಮಾರಕ ಕುರಿತು ನಿರ್ಧಾರ ಕೈಗೊಳ್ಳುತ್ತೇನೆ ಎಂದು ಟ್ವಿಟ್ ಮೂಲಕ ತಿಳಿಸಿದ್ದಾರೆ.