ಪ್ರಕೃತಿ ಚಿಕಿತ್ಸೆ ಪಡೆಯಲು ಕೇರಳಕ್ಕೆ ತೆರಳಲಿರುವ ಯಡಿಯೂರಪ್ಪ…

136
firstsuddi

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ವಿಶ್ರಾಂತಿಗಾಗಿ ಪ್ರಕೃತಿ ಚಿಕಿತ್ಸೆ ಪಡೆಯಲು ಕೇರಳಕ್ಕೆ ನಾಳೆ ತೆರಳಲಿದ್ದು,  8 ದಿನಗಳ ಕಾಲ ಕೇರಳದ ಪ್ರಾಕೃತಿಕ ಚಿಕಿತ್ಸಾ ಕೇಂದ್ರದಲ್ಲಿ ಬಿಎಸ್​ ಯಡಿಯೂರಪ್ಪ ಅವರು ವಾಸ್ತವ್ಯ ಹೂಡಲಿದ್ದಾರೆ. ಡಿಸೆಂಬರ್ 8 ರಂದು ರಾಜ್ಯಕ್ಕೆ ವಾಪಸ್ಸಾಗಲಿದ್ದಾರೆ. ಈ ವೇಳೆ ಅಲ್ಲಿನ ಕೆಲ ದೇವಾಲಯಗಳಿಗೂ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.