ಬೆಂಗಳೂರು: ಅಂಬರೀಶ್ ಅವರಿಗೆ ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಆಯೋಜಿಸಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅಂಬರೀಶ್ ಅವರ ಪತ್ನಿ ಸುಮಲತಾ ಅವರು ಮಾತನಾಡಿ ಅಂಬರೀಶ್ ಅವರ ಅಂತ್ಯಸಂಸ್ಕಾರ ದ ವೇಳೆ ಸಹಕಾರ ನೀಡಿದ ಎಲ್ಲರಿಗೆ ಧನ್ಯವಾದಗಳು ಎಂದಿದ್ದಾರೆ. ಕಾರ್ಯಕ್ರಮದಲ್ಲಿ ಅಂಬರೀಶ್ ಅವರ ಮಗ ಅಭಿಷೇಕ್ , ಸಿಎಂ ಹೆಚ್ ಡಿ ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ, ಫಿಲಂ ಚೇಂಬರ್ ಅಧ್ಯಕ್ಷ ಎಸ್.ಎ.ಚಿನ್ನೇಗೌಡ, ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದ ಸ್ವಾಮೀಜಿ, ಶಿವರಾಜ್ ಕುಮಾರ್, ಜಗ್ಗೇಶ್, ದೊಡ್ಡಣ್ಣ,ಬಿ.ಸರೋಜಾದೇವಿ, ಜಯಂತಿ, ಉಮಾಶ್ರೀ, ಕುಮಾರ್ ಬಂಗಾರಪ್ಪ, ಸಾರಾ ಮಹೇಶ್, ಶಾಸಕ ಪುಟ್ಟರಾಜುಸೇರಿದಂತೆ ಹಲವು ನಾಯಕರು ಪಾಲ್ಗೊಂಡರು.










