ಬಿಜೆಪಿ ಅಧಿಕಾರಕ್ಕಾಗಿ ಯಾವುದೇ ಆಪರೇಷನ್ ಕಮಲ ಮಾಡುವುದಿಲ್ಲ:ಕೆ.ಎಸ್ ಈಶ್ವರಪ್ಪ…

230
firstsuddi

ಹುಬ್ಬಳ್ಳಿ: ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್ ಈಶ್ವರಪ್ಪ ಅವರು ಭಾರತೀಯ ಜನತಾ ಪಕ್ಷ ಅಧಿಕಾರಕ್ಕಾಗಿ ಯಾವುದೇ ಆಪರೇಷನ್ ಕಮಲ ಮಾಡುವುದಿಲ್ಲ.ರಾಜ್ಯದಲ್ಲಿ 106 ತಾಲೂಕಿನಲ್ಲಿ ಬರಗಾಲ ಇದೆ. ಆದರೆ ಸರ್ಕಾರ ಯಾವುದೇ ಅಭಿವೃದ್ಧಿ ಕೆಲಸ ಮಾಡುತ್ತಿಲ್ಲ. ರಾಜ್ಯದಲ್ಲಿ ಸರ್ಕಾರ ಇದೆಯಾ ಎಂಬುದು ಗೊತ್ತಾಗುತ್ತಿಲ್ಲ.  ಸಂಪುಟ ವಿಸ್ತರಣೆಯಾದ ದಿನವೇ ಸರ್ಕಾರ ಪತನವಾಗಲಿದೆ. ಅಧಿಕಾರಕ್ಕಾಗಿ ಆಸೆ ಪಟ್ಟು ಜೆಡಿಎಸ್ ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದೆ. ಜೆಡಿಎಸ್ ಜೊತೆ ಸಿದ್ದರಾಮಯ್ಯ ಅವರು ಮೈತ್ರಿ ಮಾಡಿಕೊಂಡಿರಲಿಲ್ಲ. ಏಕೆಂದರೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸಿದ್ದರು. ಆದರೆ ಕಾಂಗ್ರೆಸ್ ಹೈಕಮಾಂಡ್ ಗೆ ಅಧಿಕಾರ ಬೇಕಾಗಿತ್ತು ಅದಕ್ಕಾಗಿ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಈಶ್ವರಪ್ಪ ಅವರು ತಿಳಿಸಿದ್ದಾರೆ.