ಬೆಂಗಳೂರು: ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಅವರ ಪುತ್ರಿ ಶನಾ ಪರಮೇಶ್ವರ್ ಅವರು ಬೆಂಗಳೂರಿನ ಕೋರಮಂಗಲ ರಸ್ತೆಯಲ್ಲಿ ರ್ಯಾಶ್ ಡ್ರೈವಿಂಗ್ ಮಾಡಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಶನಾ ಪರಮೇಶ್ವರ್ ಅವರು ತಮ್ಮ ಐಷಾರಾಮಿ ಕಾರನ್ನು ಮನಬಂದಂತೆ ಚಲಾಯಿಸುತ್ತಿರುವ ಬಗ್ಗೆ ಟ್ರಾಫಿಕ್ ಪೊಲೀಸರು ಯಾವುದೇ ಕಾನೂನು ಕ್ರಮ ಕೈಗೊಂಡಿಲ್ಲ ಎಂದು ಸವಾರರ ಆಕ್ರೋಶ ಕ್ಕೆ ಕಾರಣವಾಗಿದೆ.










