ಬೆಂಗಳೂರು: ದುನಿಯಾ ವಿಜಯ್ ಅವರ ಮೊದಲ ಪತ್ನಿ ನಾಗರತ್ನ ಅವರು ಇಂದು ರಾಜ್ಯ ಮಹಿಳಾ ಆರೋಗದ ಅಧ್ಯಕ್ಷೆ ನಾಗಲಕ್ಷ್ಮಿ ಬಾಯಿ ಅವರನ್ನು ಭೇಟಿ ಮಾಡಿದ್ದಾರೆ. ವಿಜಯ್ ಅವರು ತನಗೆ ಹೇಳದೇ ತಮ್ಮ ಮನೆಯನ್ನುನಿರ್ಮಾಪಕ ಸುಂದರ್ ಗೌಡ ಅವರಿಗೆ ಮಾರಿದ್ದಾರೆ ಎಂದು ನಾಗರತ್ನ ಅವರು ಆರೋಪಿಸಿದ್ದು, ನನಗೆ ನ್ಯಾಯ ಕೊಡಿಸಿ ಎಂದು ನಾಗರತ್ನಾ ಅವರು ನಾಗಲಕ್ಷ್ಮಿ ಬಾಯಿ ಅವರಿಗೆ ಮನವಿ ಮಾಡಿದ್ದಾರೆ.










